Sunday, January 19, 2025
ಸುದ್ದಿ

ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸುವ ಕುರಿತು ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಈಗಾಗಲೇ ಮಂಗಳೂರು ನಗರದಲ್ಲಿ ಅನೇಕ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳು ಕಾರ್ಯ ನಿರ್ವಹಿಸುತ್ತಿದೆ. ಆದರೆ ಅಪಘಾತದಂತಹ ದುರ್ಘಟನೆ ಸಂಭವಿಸಿದರೆ ಪ್ರಯಾಣಿಕರಿಗೆ ಅನೇಕ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು