Recent Posts

Wednesday, November 20, 2024
ಸುದ್ದಿ

ಮೀನುಗಾರಿಕಾ ಕಾಲೇಜು ವಿದ್ಯಾರ್ಥಿಗಳ  ವತಿಯಿಂದ ತಣ್ಣೀರುಬಾವಿ ಕಡಲ ತೀರದಲ್ಲಿ ಸ್ವಚ್ಛತೆ – ಕಹಳೆ ನ್ಯೂಸ್

ಮಂಗಳೂರು: ಅಂತರರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ ಅಂಗವಾಗಿ ಮಂಗಳೂರಿನ ಮೀನುಗಾರಿಕಾ ಕಾಲೇಜು ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ಕಡಲ ಕಿನಾರೆಯ ಸ್ವಚ್ಛತಾ ಕಾರ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಣ್ಣೀರುಬಾವಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಬಿಳಿ ಟೀ ಶರ್ಟ್, ಟೋಪಿ ಧರಿಸಿದ್ದ ನೂರಾರು ಮಂದಿ ತಣ್ಣೀರುಬಾವಿ ಕಡಲ ತೀರದಲ್ಲಿ ಸಂಚಲನ ಮೂಡಿಸಿದರು. ಕಡಲ ತಡಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಪ್ಲಾಸ್ಟಿಕ್, ಕುಡಿದು ಎಸೆದ ಬಾಟಲಿ, ತಿಂದು ಬಿಸಾಕಿದ ಕವರ್‍ಗಳನ್ನು ಆಯ್ದು ಚೀಲಕ್ಕೆ ತುಂಬಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಧರ್ಭದಲ್ಲಿ ಮಾತನಾಡಿದ ಮೀನುಗಾರಿಕಾ ಕಾಲೇಜಿನ ನಿವೃತ್ತ ಡೀನ್ ಡಾ. ಎಸ್.ಎಂ. ಶಿವಪ್ರಕಾಶ್ ಯುವಜನರು ಜಾಗೃತರಾಗಿ ಪರಿಸರ ಸ್ವಚ್ಛತೆಗೆ ತೊಡಗಿರುವುದು ಶ್ಲಾಘನೀಯ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದ ಜಲಚರಗಳ ಅಸ್ತಿತ್ವಕ್ಕೆ ಕುತ್ತು ಬರುತ್ತಿದೆ. ಸಾರ್ವಜನಿಕರು ಎಚ್ಚೆತ್ತುಕೊಂಡು ಕಡಲು ಮಲಿನವಾಗದಂತೆ ಎಚ್ಚರವಹಿಸಿ, ಜಲಚರಗಳನ್ನು ರಕ್ಷಿಸಬೇಕು ಎಂದು ವಿದ್ಯಾರ್ಥಿ ವೀರೇಶ್ ವಿನಂತಿಸಿದರು. ಸಂಗ್ರಹಿಸಿದ ಕಸವನ್ನು ಮಂಗಳೂರು ಮಹಾನಗರ ಪಾಲಿಕೆ ವಿಲೇವಾರಿ ಮಾಡಿತು.