Sunday, January 19, 2025
ಬಂಟ್ವಾಳ

 ಮರಕ್ಕೆ ಕಾರು ಡಿಕ್ಕಿ : ಕಿರು ಚಿತ್ರ ತಂಡದ ಐವರಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು-ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಗಾಯಗೊಂಡ ಘಟನೆ ನಡೆದಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ಕಿರು ಚಲನಚಿತ್ರವೊಂದರ ಶೂಟಿಂಗ್ ನಡೆಸಲು ತೆರಳುತ್ತಿದ್ದ ವೇಳೆ ರಾಮಲ್ ಕಟ್ಟೆ ಎಂಬಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ತೆರಳಿ ಮರವೊಂದಕ್ಕೆ ಡಿಕ್ಕಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಗೊಂಡಿದ್ದು, ಕಾರಿನಲ್ಲಿದ್ದ ಆನಂದಿತ್, ಶರತ್, ಶುಸಾನ್, ಹರ್ಷ, ಶ್ರೀರಾಮ್ ಐವರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡರೆ ಉಳಿದ ಮೂವರಿಗೆ ಅಲ್ಪಸ್ವಲ್ಪ ಗಾಯಗಳಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್. ಐ.ರಾಜೇಶ್ ಕೆ.ವಿ.ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.