Tuesday, January 21, 2025
ಸುದ್ದಿ

ಕದ್ರಿ ದಕ್ಷಿಣ ವಾರ್ಡಿನ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕರಾದ ವೇದವ್ಯಾಸ್ ಕಾಮತ್ ಅನುದಾನ ಬಿಡುಗಡೆಗೊಳಿಸುವ ಕುರಿತು ಭರವಸೆ ನೀಡಿದ್ದು, ಸದ್ಯ 15 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಂಡಿದೆ. ಮುಂಬರುವ ದಿನಗಳಲ್ಲಿ ವಾರ್ಡಿನ ಸಮಗ್ರ ಅಭಿವೃದ್ಧಿಗೆ ಅನುದಾನ ಜೋಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಬಳಿ ಅಭಿವೃದ್ಧಿಪಡಿಸುವ ಕುರಿತು ಕ್ಷೇತ್ರದ ಆಡಳಿತ ಸಮಿತಿ ಹಾಗೂ ಸ್ಥಳೀಯ ಕಾಪೆರ್Çರೇಟರ್ ಕದ್ರಿ ಮನೋಹರ್ ಶೆಟ್ಟಿಯವರು ಮನವಿ ನೀಡಿದ್ದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾಪೆರ್Çೀರೇಟರ್ ಕದ್ರಿ ಮನೋಹರ್ ಶೆಟ್ಟಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಾಧಾಕೃಷ್ಣ, ಕ್ಷೇತ್ರದ ಗುರಿಕಾರರಾದ ವಿಶ್ವನಾಥ, ಜಯ, ಮುಖಂಡರಾದ ಫೆಡ್ರಿಕ್ ಪೌಲ್, ಶಚಿಂದ್ರನಾಥ ಶೆಟ್ಟಿ, ಸಚಿನ್ ಕದ್ರಿ, ದಿನೇಶ್ ರಾಜ್ ಅಂಚನ್,ಯಶವಂತ ನಾಯ್ಕ್, ರೂಪೇಶ್ ಶೇಟ್, ತಾರನಾಥ ಶೆಟ್ಟಿ, ಜಗದೀಶ್ ಕದ್ರಿ, ಸಹನ್ ಕದ್ರಿ, ಹೇಮಂತ್ ಮುಂತಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು