Recent Posts

Monday, January 20, 2025
ಸುದ್ದಿ

ಕಚ್ಚೂರು ಶ್ರೀ ಮಾಲ್ತಿದೇವಿ ಬಬ್ಬುಸ್ವಾಮಿ ಮೂಲಕ್ಷೇತ್ರದ ನೂತನ ಅಧ್ಯಕ್ಷರಾದ ಶಿವಪ್ಪ ನಂತೂರು ಅವರನ್ನು ಅಭಿನಂದಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಕಚ್ಚೂರು ಶ್ರೀ ಮಾಲ್ತಿದೇವಿ ಬಬ್ಬುಸ್ವಾಮಿ ಮೂಲಕ್ಷೇತ್ರ ಬಾರ್ಕೂರು ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಿವಪ್ಪ ನಂತೂರು ಅವರನ್ನು ಮಂಗಳೂರು ಉತ್ತರ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಪೂಜ್ಯ ಮಹಾಪೌರರಾದ ಪ್ರೇಮಾನಂದ ಶೆಟ್ಟಿ ,ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರೂಪ ಡಿ ಬಂಗೇರ ಮತ್ತು ಸುರೇಂದ್ರ ಜೆ, ಮಾಜಿ ಮೇಯರ್ ಆದ ದಿವಾಕರ್ ಪಾಂಡೇಶ್ವರ, ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಶಕೀಲಾ ಕಾವ ,ಮನೋಹರ್ ಶೆಟ್ಟಿ, ನಗರಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ರಾಜ್ಯ ಸದಸ್ಯರಾದ ಶ್ರೀ ರಾಮಕೃಷ್ಣ ರಾವ್, ಪೂರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಅಜಯ್ ಕೋಟಿಮುರ ಹಾಗೂ ವಾರ್ಡಿನ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಎಸ್ಸಿ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಎಸ್ಸಿ ಮೋರ್ಚಾದ ಅಧ್ಯಕ್ಷರಾದ ರಘುವೀರ್ ಬಾಬುಗುಡ್ಡೆ ಪ್ರಸ್ತಾವನೆಗೈದು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಚಿಲಿಂಬಿ ಧನ್ಯವಾದ ಸಮರ್ಪಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು