Thursday, January 23, 2025
ಸುದ್ದಿ

ಭಾರತ್ ಬಂದ್ ಮಾಡಿ ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿರುವ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ; ಪ್ರತಿಭಟನಾಕಾರರಿಗೆ ಸಿಎಂ ಮನವಿ- ಕಹಳೆ ನ್ಯೂಸ್

ಹುಬ್ಬಳ್ಳಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆ ನಡೆಸುತ್ತಿರುವ ಭಾರತ್ ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಂದ್ ಹೆಸರಲ್ಲಿ ಪ್ರತಿಭಟನೆ ನಡೆಸಿ ಜನರಿಗೆ ತೊಂದರೆ ಕೊಡುತ್ತಿರುವುದು ಸರಿಯಲ್ಲ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಕೋವಿಡ್ ನಿಂದ ಸಾಕಷ್ಟು ಜನರು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವಹಿವಾಟು ಆರಂಭವಾಗಿದೆ. ಬಂದ್ ನಡೆಸಿ ಜನರಿಗೆ ಇನ್ನಷ್ಟು ತೊಂದರೆ ಕೊಡುವುದು ಸರಿಯಲ್ಲ. ಪ್ರತಿಭಟನಾಕಾರರು ಬೇರೆ ವೈಜ್ಞಾನಿಕ ರೀತಿಯಲ್ಲಿ ಧರಣಿ ನಡೆಸಿ ತಮ್ಮ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸಿ ಆದರೆ ಜನರಿಗೆ ತೊಂದರೆ ನೀಡಬಾರದು ಎಂದು ಪ್ರತಿಭಟನಕಾರರಲ್ಲಿ ಮನವಿ ಮಾಡಿಕೊಂಡರು.

ಜಾಹೀರಾತು

ಜಾಹೀರಾತು
ಜಾಹೀರಾತು