Thursday, January 23, 2025
ಸುದ್ದಿ

ಗೋಶಾಲೆ ನಿರ್ಮಾಣಕ್ಕೂ ಮುನ್ನ ಸ್ಥಳ ಪರಿಶೀಲನೆ:ಸಚಿವ ಎಸ್. ಅಂಗಾರ – ಕಹಳೆ ನ್ಯೂಸ್

ಮಂಗಳೂರು : ಸೆ.27ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಗೋಶಾಲೆ ನಿರ್ಮಾಣಕ್ಕೂ ಮುನ್ನ ಅಲ್ಲಿನ ಪ್ರದೇಶವನ್ನು ಕುಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಪಾಲಿಕ್ಲೀನಿಕ್‍ನ ಉಪನಿರ್ದೇಶಕ ಡಾ. ರಾಮಪ್ರಕಾಶ್.ಡಿ, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ.ಟಿ.ಜಿ ಪ್ರಸನ್ನಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಲವಕುಮಾರ್ ಹೆಚ್.ಆರ್, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯ ನಿರ್ವಾಹಣಾಧಿಕಾರಿ ಪುಷ್ಪಲತಾ, ಅಧ್ಯಕ್ಷ ಮೋಹನ್ ರಾಮ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು