ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ ಗೆ 752ನೇ ರ‍್ಯಾಂಕ್ – ಕಹಳೆ ನ್ಯೂಸ್
ಪುತ್ತೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) 2020-21 ನೇ ಸಾಲಿನ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ 752ನೇ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿಗೆ, ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ.
ಅಮೃತ್ ಎಚ್ ವಿ ಯವರು ತಮ್ಮ ಪಿಯುಸಿ ಶಿಕ್ಷಣವನ್ನು 2009-2011ರಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಪಡೆದು ಬಳಿಕ ಇಂಜಿನಿಯರಿ0ಗ್ ಪದವಿಯನ್ನು ಬೆಂಗಳೂರಿನಲ್ಲಿ ಪೂರೈಸಿದ್ದರು. ಬಿ.ಇ ವ್ಯಾಸಂಗ ಮುಗಿಸಿದ ಬಳಿಕ ಖಾಸಗಿ ಕಂಪನಿಯಲ್ಲಿ 2 ವರ್ಷ ಸಾಪ್ಟ್ವೇರ್ ಉದ್ಯೋಗಿಯಾಗಿ ಕೆಲಸ ಮಾಡಿ, ಬಳಿಕ ಕೆಲಸಕ್ಕೆ ರಾಜೀನಾಮೆ ನೀಡಿ ಮನೆಯಲ್ಲಿ ಕುಳಿತು ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಶ್ರವಣ ದೋಷದ ಸವಾಲನ್ನು ಹೆಮ್ಮೆಟ್ಟಿ , ತರಬೇತಿ ಸಹ ಪಡೆಯದೇ ಯುಪಿಎಸ್‌ಸಿ ಪರೀಕ್ಷೆ ಪಾಸ್ ಮಾಡಬೇಕೆಂದು ಹಠ ಹಿಡಿದ ಅಮೃತ್ ಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪಾಸ್ ಮಾಡುವುದರಲ್ಲಿ ಯಶ್ವಸಿಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.