Recent Posts

Tuesday, January 21, 2025
ಬಂಟ್ವಾಳ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ರಾಜ್ಯದ ಅತೀ ದೊಡ್ಡ ಕನ್ನಡ ಮಾಧ್ಯಮ ಶಾಲೆ: ಡಾ| ಪ್ರಭಾಕರ ಭಟ್- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಸಮವಸ್ತ್ರ ವಿತರಿಸುತ್ತಾ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಡಾ ಪ್ರಭಾಕರ ಭಟ್ ಶ್ರೀರಾಮ ಪ್ರೌಢಶಾಲೆಯು ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿರುವ ರಾಜ್ಯದ ಒಂದು ದೊಡ್ಡ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಂತಸದ ವಿಷಯ. ಕಳೆದ 40 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿ ಪ್ರೌಢಶಾಲೆಯೊಂದಿಗೆ ಆರಂಭಗೊಂಡ ಈ ವಿದ್ಯಾಸಂಸ್ಥೆ ಇಂದು ಪ್ರೌಢಶಾಲೆಯೊಂದರಲ್ಲೇ 840 ಹಾಗೂ ಪ್ರಾಥಮಿಕ ಶಾಲೆಯಲ್ಲಿ 1225 ಮತ್ತು ಶಿಶುಮಂದಿರದ 220 ವಿದ್ಯಾರ್ಥಿಗಳು ಸೇರಿ ಒಟ್ಟು 2285 ಮಂದಿ ಉಚಿತವಾಗಿ ಶಿಕ್ಷಣ, ಭೋಜನ, ಪುಸ್ತಕ, ಸಮವಸ್ತ್ರ ಹಾಗೂ ಗಣಕ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದು ಹೇಳಿದರು.

ಇದಕ್ಕೆ ಸಹಕರಿಸಿದ ವಿದ್ಯಾಭಿಮಾನಿಗಳನ್ನು ಸ್ಮರಿಸಿದರು. ಅಲ್ಲದೇ ಬಂಟ್ವಾಳ ತಾಲೂಕಿನ 115, ಇತರ ತಾಲೂಕಿನ 32ಗ್ರಾಮಗಳಿಂದ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ರಾಜ್ಯದ ಅನೇಕ ಜಿಲ್ಲೆಗಳಿಂದಲೂ ಇಲ್ಲಿನ ಶಿಕ್ಷಣವನ್ನರಸಿ ವಿದ್ಯಾರ್ಥಿಗಳು ಬರುತ್ತಿರುವುದು ನಮ್ಮ ಸಂಸ್ಕಾರಭರಿತ ಶಿಕ್ಷಣವನ್ನು ಎಲ್ಲರೂ ಒಪ್ಪಿಕೊಂಡಿರುವುದಕ್ಕೆ ಸಾಕ್ಷಿಯಾಗಿದೆ. ಕೇವಲ ಶಿಕ್ಷಣವಲ್ಲದೆ ಸಂಸ್ಥೆಯು ಸಮಾಜಾಭಿಮುಖಿ ಚಟುವಟಿಕೆಗಳಲ್ಲಿ ಕೂಡಾ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಕೊರೋನಾ ಸಂಕಷ್ಟ ಕಾಲದಲ್ಲಿ 3100ಕ್ಕೂ ಹೆಚ್ಚು ಕುಟುಂಬಗಳಿಗೆ ಸಹಕಾರ, ಉಚಿತ ವೈದ್ಯಕೀಯ – ಆರೋಗ್ಯ ಶಿಬಿರಗಳು, ವ್ಯಸನಮುಕ್ತ ಗ್ರಾಮ ಇತ್ಯಾದಿ ಯೋಜನೆಗಳ ಮೂಲಕ ಮನೆಮಾತಾಗಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಬಾಳ್ತಿಲ ಗ್ರಾಮಪಂಚಾಯತ್ ಅಧ್ಯಕ್ಷರಾದ ಹಿರಣ್ಮಯೀ, ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಮುಖ್ಯೋಪಾಧ್ಯಾಯರಾದ ಶಾಂಭವಿ ಉಪಸ್ಥಿತರಿದ್ದರು.