Sunday, November 24, 2024
ಪುತ್ತೂರು

ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ ರಂಜನ್ ವಿಶೇಷ ಸಾಧನಾ ಪ್ರಶಸ್ತಿಗೆ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ಪತ್ರಿಕೋಧ್ಯಮದ ಜೀವಮಾನದ ಸಾಧನೆಯ ಹಿರಿಯ ಪತ್ರಕರ್ತ ಬಿ.ಟಿ ರಂಜನ್ ಅವರು ಬಾಲವನ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪುತ್ತೂರು ಬಾಲವನ ಸಮಿತಿ ಅಧ್ಯಕ್ಷ, ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಸುದ್ದಿಗೋಷ್ಟಿಯಲ್ಲಿ ಪ್ರಶಸ್ತಿ ಘೋಷಿಸಿದ್ದಾರೆ.

ಅ.10ರಂದು ಪುತ್ತೂರು ಕಾರಂತ ಭವನದಲ್ಲಿ ರಾಜ್ಯಮಟ್ಟದ ಕಾರಂತ ಜನ್ಮದಿನಾಚರಣೆ, ಪ್ರಶಸ್ತಿ ಪ್ರದಾನ, ಬರಹದ ಮನೆ ಉದ್ಘಾಟನೆ, ಕೃತಿ ಬಿಡುಗಡೆ ಸಮಾರಂಭ ನಡೆಯಲಿದ್ದು, ಕನ್ನಡ ಕಲಿಸಿದ ವಿಜ್ಞಾನಿ, ಕೀಲಿಮಣೆ ವಿನ್ಯಾಸ ತಜ್ಞ ಕಿನ್ನಿಕಂಬಳ ಪದ್ಮನಾಭ ರಾವ್ (ಕೆ.ಪಿ ರಾವ್) ಬಾಲವನ ರಾಜ್ಯ ಪ್ರಶಸ್ತಿ, ಹಿರಿಯ ಪತ್ರಕರ್ತ ಬಿ.ಟಿ ರಂಜನ್ ಅವರ ಪತ್ರಿಕೋದ್ಯಮದ ಜೀವಮಾನ ಸಾಧನೆಗಾಗಿ ವಿಶೇಷ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿ ರಥಬೀದಿ ನಿವಾಸಿಯಾದ ಬಿ.ಟಿ.ರಂಜನ್ ಅವರು ಕಳೆದ 36 ವರ್ಷ ಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಕರ್ನಾಟಕದ ದೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಗರಡಿಯಲ್ಲಿ ಪತ್ರಿಕೋದ್ಯಮದ ಬದುಕನ್ನು ಆರಂಭಿಸಿರುವ ಬಂಟ್ವಾಳ ತೋನ್ಸೆ ರಂಜನ್ ಶೆಣೈ (ಬಿ.ಟಿ ರಂಜನ್ ) ಯವರು ಪತ್ರಿಕಾ ರಂಗದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಪುತ್ತೂರಿನ ಅಗ್ರಗಣ್ಯ ಪತ್ರಕರ್ತ. ಮೂರು ದಶಕಕ್ಕೂ ಅಧಿಕ ಕಾಲದಿಂದ ಪತ್ರಿಕಾ ರಂಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರು ಮುಂಗಾರು. ಮಂಗಳೂರು ಮಿತ್ರ, ಉದಯವಾಣಿ ಹಾಗೂ ಹೊಸದಿಂಗತ ಪತ್ರಿಕೆಯಲ್ಲಿ ಪತ್ರಕರ್ತರಾಗಿ ದುಡಿದಿದ್ದಾರೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸ್ಥಾಪಕ ಆಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಎರಡು ವರ್ಷಗಳ ಹಿಂದೆ ಬಿ.ಟಿ ರಂಜನ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಒಲಿದಿತ್ತು. ಇದೀಗ ಅವರ ಜೀವಮಾನದ ಸಾಧನೆಗಾಗಿ ರಾಜ್ಯ ಮಟ್ಟದ ವಿಶೇಷ ಸಾಧನಾ ಪ್ರಶಸ್ತಿ ಒಲಿದಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರಂತರ ಜನ್ಮ ದಿನಾಚರಣೆ ಉದ್ಘಾಟಿಸಲಿದ್ದಾರೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ವಿ.ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನವೀಕೃತಗೊಂಡ ಬರಹದ ಮನೆಯನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಲಿದ್ದಾರೆ. ಬಾಲವನ ಮತ್ತು ಕಾರಂತರ ಕುರಿತ ಬಾಲವನದಲ್ಲಿ ಭಾರ್ಗವ ಎಂಬ ಸಂಪಾದಿತ ಕೃತಿಯನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾನ್ಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆಗೊಳಿಸಲಿದ್ದಾರೆ.

ಉಳಿದಂತೆ ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ಬಾಲವನ ವಿಶೇಷ ಆಡಳಿತಾಧಿಕಾರಿ ಸುಂದರ ಕೇನಾಜೆ, ನಗರಸಭಾ ಅಧ್ಯಕ್ಷ ಜೀವಂಧರ ಜೈನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ, ಮಂಗಳೂರು ವಿ.ವಿ ಕಾರಂತ ಅಧ್ಯಯನ ಪೀಠದ ಸದಸ್ಯ ಡಾ.ನರಸಿಂಹಮೂರ್ತಿ ಆರ್ ಉಪಸ್ಥಿತರಿರುವರು.