Sunday, January 19, 2025
ಸುದ್ದಿ

ಬಳ್ಳಾರಿಯಿಂದ ಅನುಪಮಾ ಶೆಣೈ ಕಣಕ್ಕೆ.!

ಉಡುಪಿ: ಬಳ್ಳಾರಿ ಜಿಲ್ಲೆಯ ಕುದ್ಲಿಗಿ ಡಿವೈಎಸ್ಪಿ ಆಗಿ ಕೆಲಸ ಮಾಡಿದ್ದ ಅನುಪಮಾ ಶೆಣೈ ರಾಜಕಾರಣಿಗಳೊಂದಿಗೆ ಘರ್ಷಣೆಯಿಂದಾಗಿ 18 ತಿಂಗಳ ಹಿಂದೆಯೇ ರಾಜೀನಾಮೆ ನೀಡಿದ್ದರು.

ನಂತರದ ಬೆಳವಣಿಗೆಯಲ್ಲಿ ಕೆಲ ರಾಜಕಾರಣಿಗಳ ವಿರುದ್ಧ ನೇರ ಕಾನೂನು ಸಮರಕ್ಕೆ ಇಳಿದಿದ್ದರು .
ಇದೀಗ ಅನುಪಮಾ ಶೆಣೈ ರಾಜಕೀಯಕ್ಕೆ ಎಂಟ್ರಿ ಕೊಡುವ ಆಶಯ ವ್ಯಕ್ತ ಪಡಿಸಿದ್ದಾರೆ ಈ ಬಗ್ಗೆ ಉಡುಪಿಯ ಉಚ್ಚಿಲದಲ್ಲಿ ಮಾತನಾಡಿದ ಅನುಪಮಾ ಶೆಣೈ, ಹೊಸ ಪಕ್ಷ ಕಟ್ಟುವುದಾಗಿ ತಿಳಿಸಿದ್ದಾರೆ. ರಾಜಕಾರಣದಲ್ಲಿ ಪೊಲೀಸಿಂಗ್ ಮಾಡಬೇಕಿದೆ. ಸಮಾನ ಮನಸ್ಕರೊಂದಿಗೆ ಮಾತುಕತೆ ನಡೆಸಿ ಒಂದು ತಿಂಗಳೊಳಗೆ ಎಲ್ಲರಿಂದ ಅಭಿಪ್ರಾಯ ಪಡೆಯುತ್ತೇನೆ. ತಜ್ಞರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಗಾಂಧೀಜಿಯ ಗ್ರಾಮ ಸ್ವರಾಜ್ಯ ಕನಸು ನನಸು ಮಾಡಬೇಕಿದೆ ಎಂದು ಹೇಳಿದ್ರು.ಮೊದಲ ಸುತ್ತಿನ ಮಾತುಕತೆ ನಡೆದಿದೆ. ಬಳ್ಳಾರಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ಸಾರ್ವಜನಿಕರು ತಮ್ಮ ಅಭಿಪ್ರಾಯ ನೇರವಾಗಿ ಹಂಚಿಕೊಳ್ಳಬಹುದು ಎಂದಿದ್ದಾರೆ .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

Leave a Response