Sunday, November 24, 2024
ಬಂಟ್ವಾಳ

ಪೊಳಲಿ: ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನ ಪ್ರವೇಶ ನಾಮಫಲಕ ಅಳವಡಿಕೆ – ಕಹಳೆ ನ್ಯೂಸ್

ಬಂಟ್ವಾಳ: ಇತಿಹಾಸ ಪ್ರಸಿದ್ಧ ಸಾವಿರ ಸೀಮೆಯ ಒಡತಿ ಕಾರಣಿಕ ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಇಂದು ವಸ್ತ್ರಸಂಹಿತೆ ನೀತಿಯ ಬೋರ್ಡ್ ಅಳವಡಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಷೇತ್ರದಲ್ಲಿ ವಸ್ತ್ರಸಂಹಿತೆ ಜಾರಿಯಾಗಬೇಕೆಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಕಳೆದ ಏಪ್ರಿಲ್ ತಿಂಗಳಿನಲ್ಲಿ 3000 ಜನ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದ್ದರು. ಅದರಂತೆ ಇಂದು ವಸ್ತ್ರಸಂಹಿತೆ ನೀತಿಯ ಬೋರ್ಡ್ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಂಚಾಲಕರಾದ ಭರತ್ ಕುಮ್ಡೆಲ್, ಜಿಲ್ಲಾ ಸಹ ಸಂಚಾಲಕ್ ಗುರುರಾಜ್ ಬಂಟ್ವಾಳ್, ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ಕಾರ್ಯದರ್ಶಿ ಸುರೇಶ್ ಬೆಂಜನಪದವು, ಬಜರಂಗದಳ ಪ್ರಖಂಡ ಸಂಚಾಲಕ್ ಶಿವಪ್ರಸಾದ್ ತುಂಬೆ, ಸಂತೋμï ಕೆ ಸರಪಾಡಿ, ದೀಪಕ್ ಬಂಟ್ವಾಳ್, ಪ್ರಸಾದ್ ಬೆಂಜನಪದವು, ರತೀಶ್ ರಾಮಲ್ ಕಟ್ಟೆ, ಪ್ರವೀಣ್ ಕುಂಟಾಲಪಲ್ಕೆ, ಅಶ್ವತ್ ಪೂಂಜಾಲ್ ಕಟ್ಟೆ, ಪೊಳಲಿ ಖಂಡ ಸಮಿತಿ ಹಾಗೂ ಘಟಕದ ಪ್ರಮುಖರು ಉಪಸ್ಥಿತರಿದ್ದರು.