Thursday, January 23, 2025
ದಕ್ಷಿಣ ಕನ್ನಡರಾಜಕೀಯಸುದ್ದಿ

ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ – ನಾಮಪತ್ರ ಸಲ್ಲಿಸಿದ ಯುವ ನಾಯಕ ವಿವೇಕ್ ರಾಜ್ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು : ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿಧಾನ ಪರಿಷತ್ತಿನ ಎರಡು ಸ್ಥಾನ ಸ್ಥಳೀಯ ಸಂಸ್ಥೆಯ ಆಡಳಿತಾವಧಿ ಈ ವರ್ಷದ ಡಿಸೆಂಬರ್ ನಲ್ಲಿ ಮುಗಿಯಲಿದೆ. ಹೀಗಾಗಿ ಎರಡು ಸ್ಥಾನಗಳು ಖಾಲಿಯಾಗಲಿದೆ.

ಕಾಂಗ್ರೆಸ್ ಹೈಕಮಾಂಡ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾನು ಇನ್ನಷ್ಟು ಸೇವೆ ಮಾಡಲು ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿದ್ದು, ಇಂದು ಕಾಂಗ್ರೆಸ್ ಹೈಕಮಾಂಡ್ ಗೆ ಅರ್ಜಿ ಸಲ್ಲಿಸಿದ್ದೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಯ್ಕೆಯ ವಿಚಾರ ಪಕ್ಷಕ್ಕೆ ಹೈಕಮಾಂಡ್ ಗೆ ಬಿಟ್ಟದ್ದು. ಪಕ್ಷ‌ ನನಗೆ ಅವಕಾಶ ಕೊಡಲಿದೆ ಎಂಬ ವಿಶ್ವಾಸ ನನಗಿದೆ. ಪಕ್ಷ ನನಗೆ ಅವಕಾಶ ಕೊಟ್ಟರೇ ಇನ್ನಷ್ಟು ಸೇವೆ ಮಾಡುವ ಪ್ರತಿಜ್ಞೆಯನ್ನು ನಾನು ಈ ಮೂಲಕ ಮಾಡುತ್ತೇನೆ. ಒಂದು ವೇಳೆ ಪಕ್ಷ ನನಗೆ ಅವಕಾಶ ನೀಡದೆ ಬೇರೆ ಅಧಿಕೃತ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೂ ನಾನು ಸಾಮಾನ್ಯ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ ಅಭ್ಯರ್ಥಿಯ ಗೆಲುವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಎಂದು ವಿವೇಕ್ ರಾಜ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು