Recent Posts

Sunday, January 19, 2025
ಕಡಬ

ಕಡಬ ಬಲ್ಯದ ಗಾಣದಕೊಟ್ಟಿಗೆ ಎಂಬಲ್ಲಿ ಮಾಂಸಾಹಾರ ಸೇವಿಸಿ ಓರ್ವ ಸಾವು: ಐವರ ಆರೋಗ್ಯದಲ್ಲಿ ಏರುಪೇರು-ಕಹಳೆ ನ್ಯೂಸ್

ಕಡಬ: ಮಾಂಸಾಹಾರ ಸೇವಿಸಿ ಓರ್ವ ಮೃತಪಟ್ಟಿದ್ದು, ಹಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡಬ ತಾಲೂಕಿನ ಬಲ್ಯದ ಗಾಣದಕೊಟ್ಟಿಗೆ ಎಂಬಲ್ಲಿ ನಡೆದಿದೆ. ಗಾಣದ ಕೊಟ್ಟಿಗೆ ನಿವಾಸಿ ದೇವಪ್ಪ ಗೌಡ ಮೃತ ವ್ಯಕ್ತಿ ಎನ್ನಲಾಗಿದೆ. ಅಲ್ಲಿ ಮಧ್ಯಾಹ್ನ ಊಟಕ್ಕೆ ಮಾಡಲಾಗಿದ್ದ ಕೋಳಿ ಪದಾರ್ಥ ಸೇವಿಸಿದ್ದಾರೆ. ಕೂಲಿ ಕೆಲಸ ಮಾಡಿ ಸಂಜೆ ಮನೆಗೆ ಬಂದ ಬಳಿಕ ದೇವಪ್ಪ ಗೌಡರಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ನೆಲ್ಯಾಡಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಇನ್ನು ಸಂಜೀವ ದೇವಾಡಿಗರ ಮನೆಯಲ್ಲಿ ಊಟ ಮಾಡಿದ ಆನಂದ ಗೌಡ, ಸಂಜೀವ ದೇವಾಡಿಗರ ಪತ್ನಿ ಗೀತಾ ಮತ್ತು ಮಕ್ಕಳಾದ ಶ್ರೇಯಾ, ಶ್ರಾವಣರವರಿಗೂ ಸಹ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅವರನ್ನು ನೆಲ್ಯಾಡಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ, ದೇವಪ್ಪ ಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ದೇವಪ್ಪ ಗೌಡ ಮೃತಪಟ್ಟಿದ್ದಾರೆ. ಉಳಿದವರ ಆರೋಗ್ಯ ಸ್ಥಿತಿ ಸುಧಾರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಕುರಿತು ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೇವಪ್ಪ ಗೌಡ(ಮೃತ ವ್ಯಕ್ತಿ)

ಜಾಹೀರಾತು
ಜಾಹೀರಾತು
ಜಾಹೀರಾತು