
ಬೆಳ್ತಂಗಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಚರಂಡಿಗೆ ಉರುಳಿ ಬಿದ್ದ ಘಟನೆ ಕುವೆಟ್ಟು ಮದ್ದಡ್ಕ ಸಮೀಪದ ನಡೆದಿದೆ. ಮದ್ದಡ್ಕ ಸಮೀಪದ ಕುವೆಟ್ಟು ತಿರುವು ಬಳಿ ಬೆಳ್ತಂಗಡಿಯಿಂದ ಮಡಂತ್ಯಾರು ಕಡೆ ಸಾಗುತ್ತಿದ್ದ ಮಾರುತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಚರಂಡಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಚಾಲಕರೊಬ್ಬರೇ ಪ್ರಯಾಣಿಸುತ್ತಿರುವ ವೇಳೆ ಈ ಘಟನೆ ಸಂಭವಿಸಿದ್ದು, ಅ ಕಾರಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.