Thursday, January 23, 2025
ಹೆಚ್ಚಿನ ಸುದ್ದಿ

ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣವಾಗಿರುವ ಘೋರಿಗಳ ಸ್ಥಳಾಂತರಕ್ಕೆ ಆಗ್ರಹ: ಸಚಿವ ಸುನೀಲ್ ಕುಮಾರ್- ಕಹಳೆ ನ್ಯೂಸ್

ಚಿಕ್ಕಮಗಳೂರು: ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಪೂಜಾ ಕೈಂಕರ್ಯಕ್ಕೆ ಅರ್ಚಕರ ನೇಮಕಕ್ಕೆ ಅವಕಾಶ ನೀಡಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದೀಗ ದತ್ತಪೀಠದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಗತ್ಯ ಘೋರಿಗಳನ್ನು ಸ್ಥಳಾಂತರ ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನೀಲ್ ಕುಮಾರ್ ಆದೇಶ ನೀಡಿದ್ದಾರೆ.

ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ದತ್ತಪೀಠದ ಹೋರಾಟದ ಮೂಲಕವೇ ನಾನು ಗುರುತಿಸಿಕೊಂಡಿದ್ದೇನೆ. ದತ್ತಪೀಠದಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಕೋರ್ಟ್ ಅವಕಾಶ ನೀಡಿರುವುದು ಸ್ವಾಗತಾರ್ಹ. ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಯಲ್ಲಿರುವ ಬಾಬಾಬುಡನ್ ದರ್ಗಾ ಬೇರೆ. “ಅನಗತ್ಯವಾಗಿ ನಿರ್ಮಾಣಗೊಂಡಿರುವ ಗೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡುವ ಮೂಲಕ ನಿಮ್ಮ ನಾಗೇನಹಳ್ಳಿಯ ದರ್ಗಾವನ್ನು ನೀವು ಅಭಿವೃದ್ಧಿ ಮಾಡಿ. ಇಲ್ಲಿ ಹಿಂದೂಗಳಿಗೆ ಮುಕ್ತವಾಗಿ ಪೂಜೆ ಮಾಡಲು ಅವಕಾಶವನ್ನು ಕೊಡಬೇಕು” ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು