Thursday, January 23, 2025
ಸುದ್ದಿ

ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಮಂಗಳೂರು: ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ, ಲೇಡಿಗೋಷನ್ ಆಸ್ಪತ್ರೆ ರಕ್ತನಿಧಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲೆ ಡಾ. ಅನಸೂಯಾ ರೈ, ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಿರುವುದನ್ನು ಶ್ಲಾಘಿಸಿದರು.

ವಿದ್ಯಾರ್ಥಿಗಳನ್ನು ಅಭಿನಂದಿಸಿ ಭಾರತೀಯ ಮಾತನಾಡಿದ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್ ಎ ಪ್ರಭಾಕರ ಶರ್ಮ ಕೋವಿಡ್ ನಂತರ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಿದ್ದು ರಕ್ತಕ್ಕೆ ಬೇಡಿಕೆ ಹೆಚ್ಚಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕದ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಮಾತನಾಡುತ್ತಾ ರಕ್ತದಾನ ಶಿಬಿರಾರ್ಥಿಗಳಿಗೆ ಉಚಿತವಾಗಿ ಎನ್-95 ಮಾಸ್ಕ್ ಒದಗಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಘಟಕ, ಮಾನವಿಕ ಸಂಘ, ಕ್ರೀಡಾ ಸಂಘದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್, ಕ್ರೀಡಾ ಸಂಘದ ಡಾ. ಕೇಶವಮೂರ್ತಿ ಮತ್ತು ಎಂ.ಕಾಂ ಸಂಯೋಜಕ ಡಾ.ಯತೀಶ್ ಕುಮಾರ್ ಉಪಸ್ಥಿತರಿದ್ದರು.

ಯುವ ರೆಡ್‍ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಕುಮಾರಸ್ವಾಮಿ, ರಾಷ್ಟ್ರೀಯ ಸೇವಾ ಘಟಕದ ಅಧಿಕಾರಿ ಡಾ. ಗಾಯತ್ರಿ ಕಾರ್ಯಕ್ರಮ ನಿರ್ವಹಿಸಿದರು.