Recent Posts

Monday, January 20, 2025
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ಶಿಕ್ಷಕ-ರಕ್ಷಕ ಸಂಘದ ಸಭೆಯಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ಪ್ರಸಕ್ತ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಪುತ್ತೂರಿನ ಖ್ಯಾತ ವೈದ್ಯ ಡಾ. ಜೆ.ಸಿ.ಅಡಿಗ ಕೋವಿಡ್ ಮಹಾರೋಗದಿಂದ ಶಿಕ್ಷಣ ಕ್ಷೇತ್ರ ಹಿಂದುಳಿದಂತಾಗಿದೆ. ಈಗ ಪೋಷಕರು ಮತ್ತು ಶಿಕ್ಷಕರು ಅದನ್ನು ಸರಿದೂಗಿಸಿ ವಿದ್ಯಾರ್ಥಿಗಳ ಸರ್ವತೋಮುಖ ಯಶಸ್ಸನ್ನು ಸಾಧಿಸುವಲ್ಲಿ ಮಹತ್ತರ ಹೊಣೆಗಾರಿಕೆಯನ್ನು ನಿರ್ವಹಿಸಬೇಕಾಗಿದೆ. ಇದರಲ್ಲಿ ಶಿಕ್ಷಕ- ರಕ್ಷಕರ ಪಾತ್ರ ಅತ್ಯಂತ ಹಿರಿಯದು ಎಂದು ಹೇಳಿದರು.

ಬಳಿಕ ಮಾತನಾಡಿದ ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಕಾರ್ಯದರ್ಶಿ ಹಾಗೂ ವಿದ್ಯಾಲಯದ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ ಪಿಯುಸಿ ವಿದ್ಯಾಭ್ಯಾಸ ವಿದ್ಯಾರ್ಜನೆಯ ಅತ್ಯಂತ ಪ್ರಮುಖ ಘಟ್ಟ. ಇದರಲ್ಲಿ ಹೆತ್ತವರು ಆದಷ್ಟು ಸಮಯವನ್ನು ತಮ್ಮ ಮಕ್ಕಳಿಗಾಗಿ ಮೀಸಲಿರಿಸಿ ಅವರ ಜೊತೆಗಿದ್ದು ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು. ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಸಮಯೋಚಿತವಾಗಿ ಅವರ ಅವಶ್ಯಕತೆಗಳನ್ನು ಪೂರೈಸಿ ಉತ್ತಮ ಫಲಿತಾಂಶವನ್ನು ಪಡೆಯುವಲ್ಲಿ ಅವಿರತ ಶ್ರಮ ವಹಿಸುತ್ತಿದ್ದೇವೆ ಎಂದು ಪೋಷಕರಿಗೆ ಉತ್ತೇಜನದ ನುಡಿಗಳನ್ನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಖಜಾಂಜಿ ರಾಜಶ್ರೀ ನಟ್ಟೋಜ ಅವರು ಸಿಇಟಿ, ನೀಟ್, ಜೆಇಇ, ಸಿಎ ಕೋಚಿಂಗ್, ಎನ್‍ಡಿಎ, ಕೆವಿಪಿವೈ, ಈ ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ಇತ್ತರು. ವೇದಿಕೆಯಲ್ಲಿ ಜೀವಶಾಸ್ತ್ರದ ಉಪನ್ಯಾಸಕಿಯಾದ ಜಯಶ್ರೀ ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿದ್ದರು. ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ವಂದಿಸಿ, ರಸಾಯನಶಾಸ್ತ್ರ ಉಪನ್ಯಾಸಕ ಕೇಶವ ಕಿಶೋರ್ ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು