Recent Posts

Sunday, January 19, 2025
ಶಿಕ್ಷಣಸುದ್ದಿ

ತಾಂತ್ರಿಕ ಶಿಕ್ಷಣ ಆಧಾರಿತ ಪ್ರೌಢಶಾಲೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಹುಬ್ಬಳ್ಳಿ :‘ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣ ಸಿಗುವಂತಾಗಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‍ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಿಯಾಂಡ್ ಬೆಂಗಳೂರು ‘ಇನ್ನೋವೇಷನ್ & ಇಂಪ್ಯಾಕ್ಟ್ ಹುಬ್ಬಳ್ಳಿ’ ಕಾರ್ಯಕ್ರಮವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ‘1960ರಲ್ಲಿಯೇ ಹುಬ್ಬಳ್ಳಿಯಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಪ್ರೌಢಶಾಲೆ ಇತ್ತು. ಮುಂದೆ ಅದು ಬಂದ್ ಆಯಿತು. ತಾಂತ್ರಿಕ ಶಿಕ್ಷಣದಿಂದ ಮಕ್ಕಳಲ್ಲಿ ಗ್ರಹಿಸುವ ಸಾಮಥ್ರ್ಯ ಚೆನ್ನಾಗಿರುತ್ತದೆ. ಆ ನಿಟ್ಟಿನಲ್ಲಿ . ಆದ್ದರಿಂದ ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು ಆರಂಭಿಸಲಾಗುವುದು’ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹುಬ್ಬಳ್ಳಿಯಲ್ಲಿ ಎಐ (ಕೃತಕ ಬುದ್ಧಿಮತ್ತೆ) ಮತ್ತು ಡಾಟಾ ಎಂಜಿನಿಯರಿಂಗ್ ಗೆ ಸಂಬಂಧಿಸಿದಂತೆ ಸೆಂಟರ್ ಆಫ್ ಎಕ್ಸ್‍ಲೆನ್ಸ್ ಕೇಂದ್ರವನ್ನು ಶೀಘ್ರವೇ ಸ್ಥಾಪಿಸಲಾಗುವುದು. ಸಾಫ್ಟ್‍ವೇರ್ ಪಾರ್ಕ್ ನಿರ್ಮಾಣಕ್ಕೆ 50 ಎಕರೆ ಜಮೀನು ಒದಗಿಸಲಾಗುವುದು ಎಂದು ಹೇಳಿದರು.’ಪ್ರೌಢಶಾಲೆ ಹಂತದಿಂದಲೇ ಕೋಡಿಂಗ್ ಕಲಿಸಲಾಗುವುದು. ಅದಕ್ಕೆ ಅಗತ್ಯವಿರುವ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು’ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು