Thursday, January 23, 2025
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ವಾರ್ಡಿನ ಶಿವನಗರದಲ್ಲಿ ನೂತನವಾಗಿ ಅಂಗನವಾಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಳಪೆ ಉತ್ತರ ವಾರ್ಡಿನ ಶಿವನಗರದಲ್ಲಿ ನೂತನ ಅಂಗನವಾಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಮಕ್ಕಳ ಪ್ರಾಥಮಿಕ ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಶಿವನಗರದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಕ್ಕೆ ಭೂಮಿಪೂಜೆ ನೆರವೇರಿಸಿದ್ದೇವೆ. ಕಟ್ಟಡ ನಿರ್ಮಾಣಕ್ಕೆ ಬೇಕಾದ 16.50 ಲಕ್ಷ ಅನುದಾನವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಒದಗಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ರೂಪಶ್ರೀ ಪೂಜಾರಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಬಿಜೆಪಿ ಮುಖಂಡರಾದ ಸುರೇಶ್ ಆಚಾರ್, ಪ್ರವೀಣ್ ನಿಡ್ಡೇಲ್, ಶರಣ್ ಸರಿಪಲ್ಲ, ಗೀತಾ ಶೆಟ್ಟಿ, ನರೇಶ್ ಸರಿಪಲ್ಲ, ವಸಂತ್ ಜೆ ಪೂಜಾರಿ, ಲತಾ ಜಗದೀಶ್, ಕವಿತಾ, ಜಯಪ್ರಕಾಶ್, ವಿಜಯ್ ಭಂಡಾರಿ, ಪ್ರವೀಣ್, ಮೋಹನ್ ದಾಸ್ ಶೆಟ್ಟಿ, ಹಿರಿಯರಾದ ಪದ್ಮಾವತಿ, ಅಂಗನವಾಡಿ ಕಾರ್ಯಕರ್ತೆ ಸವಿತಾ, ಅಂಗನವಾಡಿ ಮೇಲ್ವಿಚಾರಕಿ ರೆಹನಾ, ಸಂಬಂಧಪಟ್ಟ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು