ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕದ ವತಿಯಿಂದ ದೇವಾಲಯಕ್ಕೆ ಮನವಿ- ಕಹಳೆ ನ್ಯೂಸ್
ಬಂಟ್ವಾಳ: ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರ ನೆಟ್ಲ ಇಲ್ಲಿನ ವ್ಯವಸ್ಥಾಪನ ಸಮಿತಿಗೆ ದೇವಸ್ಥಾನದ ಮ್ಯಾನೇಜರ್ ಮಾಧವ ಭಟ್ ನೆಟ್ಲರವರಿಗೆ ವಿಶೇಷ ಮನವಿ ನೀಡಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಹಿಂದೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶ ಮಾಡಬೇಕೆಂದು .ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕದ ವತಿಯಿಂದ ಮನವಿ ಸಲ್ಲಿಸಲಾಯಿತು.
ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ವಸ್ತ್ರಗಳನ್ನು ಧರಿಸಿಕೊಂಡು ದೇವಾಲಯ ಪ್ರವೇಶಿಸುತ್ತಿದ್ದು, ಈ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಶೀಘ್ರವೇ ವಸ್ತ್ರಸಂಹಿತೆಯನ್ನು ಜಾರಿಗೊಳಿಸಬೇಕು. ಸಂಪ್ರದಾಯಿಕ ಉಡುಗೆಯನ್ನು ತೊಟ್ಟು ದೇವಸ್ಥಾನ ಪ್ರವೇಶಿಸುವಂತೆ ಭಕ್ತಾಧಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕ ವಲಯದ ವತಿಯಿಂದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರ ದೇವಾಲಯದ ಅಧ್ಯಕ್ಷರು ಮತ್ತು ವ್ಯವಸ್ಥಾಪನ ಸಮಿತಿಗೆ ಮನವಿ ಸಲ್ಲಿಸಿ, ವಸ್ತ್ರ ಸಂಹಿತೆ ಕಡ್ಡಾಯ ಎಂಬ ನಾಮಫಲಕ ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ಬಜರಂಗದಳ ವಿಟ್ಲ ಪಖಂಡ ಸಹಗೋರಕ್ಷ ಪ್ರಮುಖ್ ಅಮಿತ್ ಕಲ್ಲಡ್ಕ, ವಿಶ್ವ ಹಿಂದೂ ಪರಿಷದ್ ಕಲ್ಲಡ್ಕ ವಲಯದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿಗಾರ್, ಕಾರ್ಯದರ್ಶಿ ನವೀನ್ ಮಾಡಲ, ಬಜರಂಗದಳ ಕಲ್ಲಡ್ಕ ವಲಯದ ಸಂಚಾಲಕ ಮೋಹನದಾಸ್ ಕಲ್ಲಡ್ಡ ಹಾಗೂ ವಲಯದ ಬಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.