Thursday, January 23, 2025
ಸುದ್ದಿ

ಕಣ್ಣೂರು ವಾರ್ಡಿನ ಬೋರುಗುಡ್ಡೆ ದಯಾಂಬು ಬಳಿ ನೂತನ ಅಂಗನವಾಡಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಕಣ್ಣೂರು ವಾರ್ಡಿನ ಬೋರುಗುಡ್ಡೆ ದಯಾಂಬು ಬಳಿ ನೂತನ ಅಂಗನವಾಡಿ ಕೇಂದ್ರದ ನಿರ್ಮಾಣ ಕಾಮಗಾರಿಗೆ ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು ಈಗಾಗಲೇ ಬೋರುಗುಡ್ಡೆ ದಯಾಂಬುನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರೌಢಶಾಲೆಯ ಬಳಿ ಹೈಸ್ಕೂಲ್ ಕಟ್ಟಡ ನಿರ್ಮಾಣಕ್ಕೆ 33 ಲಕ್ಷ ರೂಪಾಯಿ ಅನುದಾನ ಒದಗಿಸಿದ್ದು ಅದರ ಕಾಮಗಾರಿ ಪ್ರಗತಿಯಲ್ಲಿದೆ. ಸದ್ಯ ಅಂಗನವಾಡಿಯ ನಿರ್ಮಾಣ ಕಾರ್ಯವೂ ಪ್ರಾರಂಭವಾಗಲಿದ್ದು ಈ ಪರಿಸರದ ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷಣ ವ್ಯವಸ್ಥೆ ಸಹಕಾರಿಯಾಗಲಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಸ್ಥಳೀಯ ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್, ಬಿಜೆಪಿ ಮುಖಂಡರಾದ ವಸಂತ್ ಜೆ. ಪೂಜಾರಿ, ಸುರೇಶ್ ಕುಲಾಲ್, ವಿಶ್ವನಾಥ್ ಪೂಜಾರಿ, ಯಶವಂತ್, ನಿಖಿತ್ ಕೊಟ್ಟಾರಿ, ಯುವರಾಜ್, ವಿಶ್ವನಾಥ್, ರೋಹಿಣಿ, ಶರ್ಮಿಳಾ, ರಜನಿ, ಶಾಕೀರ್, ಇಕ್ಬಾಲ್, ಮಜೀದ್, ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಕಾರ್ಯಕರ್ತರು, ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು