ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಕೆಎಸ್‍ಆರ್ ಟಿಸಿ ಸಂಸ್ಥೆಯಿಂದ 1 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ- ಕಹಳೆ ನ್ಯೂಸ್
ಬೆಂಗಳೂರು: ದಸರಾ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಕೆಎಸ್‍ಆರ್‍ಟಿಸಿ ಸಿಹಿಸುದ್ದಿ ನೀಡಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 13 ರಿಂದ 21 ರವರೆಗೆ 1000 ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಮತ್ತು ಹೊರ ರಾಜ್ಯದ ಸ್ಥಳಗಳಿಗೆ ಹೆಚ್ಚುವರಿಯಾಗಿ 1000ಬಸ್ ಕಾರ್ಯಾಚರಣೆ ನಡೆಸಲಿದ್ದು, ಬೆಂಗಳೂರಿನಿಂದ ಶಿವಮೊಗ್ಗ, ಸುಬ್ರಹ್ಮಣ್ಯ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕಾರವಾರ, ರಾಯಚೂರು, ಕಲಬುರ್ಗಿ, ಕೊಪ್ಪಳ, ಬೀದರ್, ಯಾದಗಿರಿ, ವಿಜಯವಾಡ, ತಿರುಪತಿ, ಹೈದರಾಬಾದ್, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ತಿರುವನಂತಪುರಂ, ಪೂನಾ, ಪಣಜಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್ಸುಗಳ ಸಂಚರಿಸಲಿವೆ.
ದಸರಾ ಪ್ರಯುಕ್ತ ಕಾರ್ಯಾಚರಣೆಗೊಳಿಸಲಾಗುವ ವಿಶೇಷ ಬಸ್‍ಗಳ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ. ಕೆಎಸ್‍ಆರ್ ಟಿಸಿ ವೆಬ್ ಸೈಟ್ ಮತ್ತು ಬುಕಿಂಗ್ ಕೌಂಟರ್ ಗಳಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಜನರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‍ಗಳನ್ನು ಓಡಿಸಲಾಗುತ್ತಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹೇಳಿದ್ದಾರೆ.