Recent Posts

Tuesday, January 21, 2025
ಸುದ್ದಿ

ಸಾರ್ವಜನಿಕ ಪ್ರದೇಶದಲ್ಲಿ ಕಸ ಎಸೆದವರಿಗೆ ದಂಡ ವಿಧಿಸಿದ ಸಾಣೂರು ಗ್ರಾಮ ಪಂಚಾಯತ್- ಕಹಳೆ ನ್ಯೂಸ್

ಕಾರ್ಕಳ: ಸ್ವಚ್ಛ ಸಾಣೂರು ನಿರ್ಮಿಸುವ ಸಂಕಲ್ಪವನ್ನು ಹೊಂದಿದ್ದ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಡುತ್ತಾ ಬಂದಿದ್ದು, ಸಾರ್ವಜನಿಕ ಪ್ರದೇಶದಲ್ಲಿ ಕಸ ಬಿಸಾಕಿದವರಿಗೆ ದಂಡ ವಿಧಿಸುವ ನಿರ್ಣಯ ಕೈಗೊಳ್ಳಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅದರಂತೆ ಸಾರ್ವಜನಿಕ ಪ್ರದೇಶದಲ್ಲಿ ಕಸ ಬಿಸಾಕಿದವರನ್ನು ಹುಡುಕಿ ಅವರಿಗೆ ದಂಡ ವಿಧಿಸಿದ ಘಟನೆ ಸಾಣೂರು ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಕಸವನ್ನು ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು ಎಮ್.ಸಿ 2000 ರೂಪಾಯಿ ದಂಡ ವಿಧಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಬಿಸಾಡುವವರಿಗೆ ಎಚ್ಚರಿಕೆಯನ್ನು ನೀಡಲಾಗಿದೆ ಮುಂದಿನ ದಿನಗಳಲ್ಲಿ ರಸ್ತೆಬದಿಯಲ್ಲಿ ಕಸವನ್ನು ಬಿಸಾಡಿದರೆ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಾಣೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು