Monday, November 25, 2024
ಪುತ್ತೂರು

ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯಿಂದ ಸ್ವಾಯತ್ತತೆಯನ್ನು ಕೋರಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮನವಿ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ರಿ. ಇದರ ವಿದ್ಯಾಸಂಸ್ಥೆ ವಿವೇಕಾನಂದ ಮಹಾವಿದ್ಯಾಲಯವು ಈವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಯೊಂದಿಗೆ ಕಾರ್ಯನಿರ್ವಹಿಸುತ್ತಾ ಬಂದಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಕಾಲೇಜುಗಳ ಸ್ವಾಯತ್ತತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದೆ. ಇದರ ಅನ್ವಯ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ಧಾರದ ಮೇರೆಗೆ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯು ಸ್ವಾಯತ್ತತೆಯನ್ನು ಕೋರಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮನವಿಯನ್ನು ಸಲ್ಲಿಸಿತ್ತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ, ರಿಜಿಸ್ಟರ್ ಪ್ರೊ. ಕಿಶೋರ್ ಕುಮಾರ್ ಅವರಿಗೆ, ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ ಎನ್, ಕೋಶಾಧಿಕಾರಿ ಸೇಡಿಯಾಪು ಜನಾರ್ದನ ಭಟ್, ವಿವೇಕಾನಂದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಪ್ರಾಧ್ಯಾಪಕರಾದ ಡಾ. ಶ್ರೀಧರ ಹೆಚ್.ಜಿ., ಪ್ರೊ. ಕೃಷ್ಣ ಕಾರಂತ್, ಶಿವಪ್ರಸಾದ್, ಡಾ. ವಿಜಯ ಸರಸ್ವತಿ ಹಾಗೂ ರಾಘವೇಂದ್ರ ಅವರನ್ನು ಒಳಗೊಂಡ ತಂಡ ಕಾಲೇಜಿನ ಸ್ವಾಯತ್ತತೆಯನ್ನು ಕೋರಿ ಮನವಿಯನ್ನು ಸಲ್ಲಿಸಿತು. ಕಾಲೇಜಿನ ಸ್ವಾಯತ್ತತೆ ಎನ್ನುವುದು ಪಠ್ಯಕ್ರಮದ ರೂಪುರೇಷೆಯನ್ನು ಸಿದ್ಧಪಡಿಸುವಲ್ಲಿ ಹಾಗೂ ಇಂದಿನ ದಿನಗಳಲ್ಲಿ ಅಗತ್ಯವಿರುವ ಬದುಕಿಗೆ ಪೂರಕವಾದ ಶಿಕ್ಷಣ ಸಾಮಗ್ರಿಗಳನ್ನು ಹಾಗೂ ಕೌಶಲ್ಯಾಭಿವೃದ್ಧಿ ವಿಷಯಗಳನ್ನು ಒಳಗೊಂಡ ಪಠ್ಯಕ್ರಮದ ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ.

ಜಾಹೀರಾತು

ಜಾಹೀರಾತು
ಜಾಹೀರಾತು