ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು , ಯುವತಿಯೋರ್ವಳು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.11ರ ಬೆಳಗ್ಗೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರಿ ನಿಶ್ಮಿತಾ (22) ಎಂದು ಗುರುತಿಸಲಾಗಿದೆ.
ಡೆಂಟಲ್ ಕ್ಲಿನಿಕ್ನಲ್ಲಿ ಸಹಾಯಕಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಿಶ್ಮಿತಾ ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಇಂದು ಮುಂಜಾನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆರೆಯ ದಡದಲ್ಲಿ ಆಕೆ ಬರೆದ ಡೆತ್ನೋಟ್ ಮತ್ತು ನಿಶ್ಮಿತಾ ಉಪಯೋಗಿಸುತ್ತಿದ್ದ ಮೊಬೈಲ್ ಕೂಡ ಪತ್ತೆಯಾಗಿದೆ. ಡೆತ್ನೋಟ್ನಲ್ಲಿ ಮೂವರ ಹೆಸರು ಉಲ್ಲೇಖವಿದೆ. ಎಂದು ತಿಳಿದುಬಂದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.