Recent Posts

Monday, January 20, 2025
ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆಯು ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆ ಗಣಪತಿ ಹವನನೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ವಿವಿಧ ವಿಭಾಗಗಳ ಪ್ರಯೋಗಾಲಯಗಳಿಗೆ ತೆರಳಿ ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ಶಾರದಾ ಪೂಜೆಯ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ಉಪಾಧ್ಯಕ್ಷ ಸತೀಶ್ ರಾವ್.ಪಿ, ಎಂಜಿನಿಯರಿಂಗ್ ಕಾಲೇಜಿನ ಕೋಶಾಧಿಕಾರಿ ಮುರಳೀಧರ ಭಟ್.ಬಿ, ನಿರ್ದೇಶಕರುಗಳಾದ ಸುಬ್ರಮಣ್ಯ ಭಟ್.ಟಿ.ಎಸ್, ರವಿಕೃಷ್ಣ. ಡಿ. ಕಲ್ಲಾಜೆ, ವಿಶ್ವಾಸ್ ಶೆಣೈ, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು