Recent Posts

Monday, January 20, 2025
ಸುದ್ದಿ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು – ಸಚಿವರು ಶಾಸಕರಿಂದ ಅದ್ದೂರಿ ಸ್ವಾಗತ – ಕಹಳೆ ನ್ಯೂಸ್

ಮಂಗಳೂರು : ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅಕ್ಟೋಬರ್ ೧೩ರ ಬುಧವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು


ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.ನ0ತರ ಮುಖ್ಯಮಂತ್ರಿಗಳು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಸ್ತೆ ಮಾರ್ಗವಾಗಿ ತೆರಳಿದರು.