Recent Posts

Monday, January 20, 2025
ಸುದ್ದಿ

ಹಾವಿನಿಂದ ಕಚ್ಚಿಸಿ ಪತ್ನಿಯನ್ನ ಕೊಂದ ಖತರ್ನಾಕ್ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ವಿಷದ ಹಾವಿನಿಂದ ಕಚ್ಚಿಸಿ ಪತ್ನಿ ಉತ್ತರಳನ್ನ ಕೊಂದಿದ್ದ ಗಂಡ ಸೂರಜ್‍ಗೆ ಡಬಲ್ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 5 ಲಕ್ಷ ರೂ. ದಂಡ ನೀಡಬೇಕೆಂದು ಘೋಷಿಸಲಾಗಿದೆ. ಕೊಲ್ಲಂನ ಉತ್ತರ ಹತ್ಯೆ ಪ್ರಕರಣದ ತೀರ್ಪನ್ನು ಇಂದಿಗೆ ಕಾಯ್ದಿರಿಸಲಾಗಿತ್ತು. ಆ ತೀರ್ಪು ಇದೀಗ ಹೊರಬಿದ್ದಿದ್ದು, ಹಾವಿನಿಂದ ಕಚ್ಚಿಸಿ ಹೆಂಡತಿಯನ್ನು ಕೊಂದು, ಅದೊಂದು ಆಕಸ್ಮಿಕ ಸಾವೆಂದು ಎಲ್ಲರನ್ನೂ ನಂಬಿಸಿದ್ದ ಉತ್ತರಳ ಪತಿ ಆರೋಪಿ ಸೂರಜ್ ಕುಮಾರ್‍ಗೆ ಎರಡು ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಗಿದೆ. ಹಾಗೇ 5 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ. ಕೇರಳದ ಕೊಲ್ಲಂನ ಅಡಿಷನಲ್ ಸೆಷನ್ಸ್ ಕೋರ್ಟ್ ಇಂದು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು