Monday, January 20, 2025
ಸುದ್ದಿ

ಬಡಗು ತಿಟ್ಟು ಯಕ್ಷಗಾನ ರಂಗದ ಹಿರಿಯ ವೇಷಧಾರಿ ಅನಂತ ಕುಲಾಲ್ ಇನ್ನಿಲ್ಲ – ಕಹಳೆ ನ್ಯೂಸ್

ಬಡಗು ತಿಟ್ಟು ಯಕ್ಷಗಾನ ರಂಗದ ಹಿರಿಯ ವೇಷಧಾರಿ ಅನಂತ ಕುಲಾಲ್ ಅವರು ಮೊಳಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಐದು ದಶಕಗಳ ಕಾಲ ಯಕ್ಷಗಾನ ರಂಗದಲ್ಲಿ ಗೆಜ್ಜೆ ಸೇವೆ ಮಾಡಿ, ವೈವಿಧ್ಯಮಯ ವೇಷಗಳನ್ನು ನಿರ್ವಹಿಸಿ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.

ಪುರುಷ ವೇಷಧಾರಿಯಾಗಿ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದ ಅವರು ಅಮೃತೇಶ್ವರಿ, ಹಿರಿಯಡಕ, ಸಾಲಿಗ್ರಾಮ, ಪೆರ್ಡೂರು, ಹಾಲಾಡಿ ಮೇಳಗಳಲ್ಲೂ ಕಲಾಸೇವೆಗೈದಿದ್ದರು. ಅನಂತ ಕುಲಾಲ್ ಅವರು ಪ್ರಸಿದ್ಧ ಮಾರಣಕಟ್ಟೆ ಕ್ಷೇತ್ರದ ಬಯಲಾಟ ಮೇಳಗಳಲ್ಲೇ ಸುಮಾರು ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಅಲ್ಲದೆ ಯಕ್ಷಗಾನ ಕಲಾರಂಗದ ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’, ಎಮ್. ಎಮ್. ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಸನ್ಮಾನಗಳಿಗೆ ಭಾಜನರಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

66 ವರ್ಷ ಪ್ರಾಯದ ಇವರು ಕಳೆದ ಆರು ತಿಂಗಳಿನಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅನಂತ್ ಕುಲಾಲ್ ಅವರ ನಿಧನಕ್ಕೆ ಗಣ್ಯರು, ಸಹಕಲಾವಿದರು ಸೇರಿದಂತೆ ಅಪಾರ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು