Recent Posts

Monday, January 20, 2025
ಸುಳ್ಯ

ಅ. 16ರಂದು ಸುಳ್ಯ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ- ಕಹಳೆ ನ್ಯೂಸ್

ಮಂಗಳೂರು : ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿ, ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದ್ದು, ಸಾರ್ವಜನಿಕರು ನೇರವಾಗಿ ಆಹವಾಲುಗಳನ್ನು ನೀಡಲು ಇಚ್ಛಿಸಿದ್ದಲ್ಲಿ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕದಲ್ಲಿ ಅರ್ಜಿ ನೀಡಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಜಿಲ್ಲಾಧಿಕಾರಿಗಳ ಜೊತೆಗೆ ಇರಲಿದ್ದಾರೆ. ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು, ಸಮಸ್ಯೆಗೆ ಪರಹಾರ ಸಿಗದಿದ್ದಲ್ಲಿ ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಆ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವಂತೆ ಹಾಗೂ
ಗ್ರಾಮ ವಾಸ್ತವ್ಯದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸುಳ್ಯ ತಾಲೂಕು ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.