Friday, January 24, 2025
ಮೂಡಬಿದಿರೆ

ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೆಇಇ ಅಡ್ವಾನ್ಸ್ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ- ಕಹಳೆ ನ್ಯೂಸ್

ಮೂಡಬಿದಿರೆ : ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಘ್ನೇಶ್ ಹರೀಶ್ ನಾಯಕ್ ರಾಷ್ಟ್ರಮಟ್ಟದಲ್ಲಿ 574ನೇ ರ‍್ಯಾಂಕ್ ಹಾಗೂ ಸುಮುಕ್.ಎಸ್.ಕೆ 2376ನೇ ರ‍್ಯಾಂಕ್ (ಇ.ಡಬ್ಲ್ಯು.ಎಸ್) ಪಡೆದಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತಮ ಸಾಧನೆಯನ್ನು ಮಾಡಿರುವ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ, ಜೆ.ಇ.ಇ ಸಂಯೋಜಕರಾದ ರಾಮಮೂರ್ತಿ, ಡಾ. ದಯಾನಂದ್, ಶೈಲೇಶ್ ಶೆಟ್ಟಿ ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.