Friday, January 24, 2025
ಸುದ್ದಿ

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಸ್ಕೂಲ್ ನವೀಕರಣ – ಹೊೈಗೆಬಜಾರ್‍ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರೌಢ ಶಾಲೆ ಉದ್ಘಾಟನೆ – ಕಹಳೆ ನ್ಯೂಸ್

ಸರಕಾರಿ ಶಾಲೆಗಳ ನವೀಕರಣದಿಂದ ಸಾಕಷ್ಟು ಬಡ ಮಕ್ಕಳಿಗೆ ಶಿಕ್ಷಣ ವ್ಯವಸ್ಥೆಯಲ್ಲಿ ಅನುಕೂಲ ಮಾಡಿಸಿದಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ಸ್ಮಾರ್ಟ್ ಸ್ಕೂಲ್ ಎಂಬ ಪರಿಕಲ್ಪನೆಯೊಂದಿಗೆ 1.10 ಕೋಟಿ ವೆಚ್ಚದಲ್ಲಿ ಶಾಲೆಯನ್ನು ನವೀಕರಿಸಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಹೇಳೀದ್ದಾರೆ.

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಸ್ಕೂಲ್ ಆಗಿ ನವೀಕರಣಗೊಳಿಸಿದ, ಹೊೈಗೆಬಜಾರ್‍ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರೌಢ ಶಾಲೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಇವರು ಸರಕಾರಿ ಶಾಲೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಖಾಸಗಿ ಶಾಲೆಗಳಂತೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಯೋಜನೆ ರೂಪುಗೊಂಡಿದೆ. ಶಾಲೆಯಲ್ಲಿ ಆನ್ಲೈನ್ ತರಗತಿಗಳಿಗಾಗಿ ಆಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಇಂಟರ್ ನೆಟ್ ವ್ಯವಸ್ಥೆ, ಶೌಚಾಲಯಗಳ ಆಧುನೀಕರಣ,ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಕ್ರೀಡಾಂಗಣ, ನೆಲಹಾಸು, ಕಾರ್ಯಕ್ರಮಗಲವಿಗಾಗಿ ವೇದಿಕೆ ನಿರ್ಮಾಣ ಸೇರಿದಂತೆ ಶಾಲೆಯ ಆವರಣದಲ್ಲಿ ಹುಲ್ಲು ಹಾಸು, ಹೂವಿನ ಗಿಡಗಳನ್ನು ನೆಡಲಾಗಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಸ್ಮಾರ್ಟ್ ಸ್ಕೂಲ್ ಪರಿಕಲ್ಪನೆಯಿಂದ ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳಿಗೆ ಹೆಚ್ಚಿನ ಸಹಾಯವಾಗಲಿದೆ. ಸರಕಾರಿ ಶಾಲೆಗಳನ್ನು ಉನ್ನತೀಕರಿಸುವುದರಿಂದ ವಿಧ್ಯಾರ್ಥಿಗಳ ದೈನಂದಿನ ಚಟುವಟಿಕೆಗಳಿಗೆ ಅನುಕೂಲ ಮಾಡಿಸಿದಂತಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪ ಮೇಯರ್ ಸುಮಂಗಲ ರಾವ್, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೋಕೇಶ್ ಬೊಳ್ಳಾಜೆ, ಲೀಲಾವತಿ ಪ್ರಕಾಶ್, ಶೋಭಾ ರಾಜೇಶ್, ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು, ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.