Friday, January 24, 2025
ಪುತ್ತೂರು

ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ – ಪುತ್ತೂರು ವಿಧಾನಸಭಾ ಕ್ಷೇತ್ರದ ಅಮೃತ ಗ್ರಾಮಪಂಚಾಯತ್ ಮತ್ತು ಅಮೃತ ವಸತಿ ಯೋಜನೆಯ ಕಾರ್ಯಕ್ರಮ – ಶಾಸಕರಿಂದ ದೀಪ ಬೆಳಗಿಸಿ ಉಧ್ಘಾಟನೆ – ಕಹಳೆ ನ್ಯೂಸ್

ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಮೃತ ಗ್ರಾಮಪಂಚಾಯತ್ ಮತ್ತು ಅಮೃತ ವಸತಿ ಯೋಜನೆಯ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಸಂಜೀವ ಮಠಂದೂರುರವರು ದೀಪ ಬೆಳಗಿಸಿ ಉಧ್ಘಾಟಿಸಿದರು.

ಅಜಾದಿ ಕಾ ಅಮೃತ ಮಹೋತ್ಸವ್ ಅಂಗವಾಗಿ ಪ್ರದಾನಮಂತ್ರಿಗಳಾದ ನರೇಂದ್ರ ಮೋದಿಯವರು, ಗ್ರಾಮಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು ಆಯ್ಕೆಗೊಂಡ ಪಂಚಾಯತ್‍ಗಳು ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಾಗಿದೆ ತಮ್ಮ ವ್ಯಾಪ್ತಿಯ ಶಾಲೆ, ರಸ್ತೆ, ಸಮುದಾಯ ಕೇಂದ್ರ ಗಳನ್ನು ಮಾದರಿಯಾಗಿ ರೂಪಿಸಬೇಕು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಮೇಶ ಬಾಬು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಶ್ರೀಮತಿ ಸಂಧ್ಯಾ ಕೆ.ಎಸ್, ಪಂಚಾಯತ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು