Thursday, January 23, 2025
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮಿಗೆ ಸನ್ಮಾನ- ಕಹಳೆ ನ್ಯೂಸ್

ಪುತ್ತೂರು: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ್ಯಾಂಕ್ ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ಪುತ್ತೂರಿನ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿರವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಸನ್ಮಾನಿಸಿಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ರವರು ಸಿಂಚನಾಲಕ್ಷ್ಮಿರವರಿಗೆ ಶಾಲು ಹೊದಿಸಿ ಪುಸ್ತಕ ಮತ್ತು ಸ್ಮರಣಿಕೆ ನೀಡಿ ಅಭಿನಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸಂತೋಷ್ ಬಿ, ಉಪನ್ಯಾಸಕರಾದ ಹರೀಶ್ ಭಟ್, ಮುರಳಿ ಪಿ.ಜಿ ಮತ್ತಿತರರು ಉಪಸ್ಥಿತರಿದ್ದರು.