Thursday, January 23, 2025
ಪುತ್ತೂರು

ಪುತ್ತೂರು : ಪಾದೆಕರ್ಯದಲ್ಲಿ ಆತ್ಮಹತ್ಯೆಗೆ ಶರಣಾದ ಕೃಷಿಕ ದಂಪತಿ– ಕಹಳೆ ನ್ಯೂಸ್

ಪುತ್ತೂರು : ಕೃಷಿಕ ದಂಪತಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಭಟ್ (84) – ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ,ಅವನ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಬೆಳಿಗ್ಗೆ ಪುತ್ರ ಎದ್ದು ನೋಡಿದಾಗ ದಂಪತಿಗಳಿಬ್ಬರು ಪ್ರತ್ಯೇಕ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು