Thursday, January 23, 2025
ಸುದ್ದಿ

ಮಂಗಳೂರು ಪಂಪ್‍ವೆಲ್‍ನ ಲಾಡ್ಜ್ ನಲ್ಲಿ ಯುವಕನ ಕೊಲೆ – ಪ್ರಕರಣದ ಪ್ರಮುಖ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು:  ನಗರದ ಪಂಪ್‍ವೆಲ್‍ನ ಲಾಡ್ಜ್ ನಲ್ಲಿ ಯುವಕನೊಬ್ಬನ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ಟೋಬರ್.15 ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್,ಪ್ರಜ್ವಲ್ ಎಂಬವರು ತೆರಳಿದ್ದರು. ಸಮಯ ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್ ಎಂಬಾತನು ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದಾನೆ ಎನ್ನಲಾಗಿದೆ.
ಇದರಿಂದ ಧನುಷ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿದ್ದ ಎಂದು ದೂರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಜೇಸನ್ ಸೇರಿದಂತೆ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದರು. ಇನ್ನೊಬ್ಬ ಆರೋಪಿಗೆ ಶೋಧ ಮುಂದುವರಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು