ಕಾಸರಗೋಡು – ಎರಡೂವರೆ ವರ್ಷದ ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ನೀಲೇಶ್ವರದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಹೆಣ್ಣು ಮಗುವಿನ ಮೃತ ದೇಹ ಮನೆಯ ಸಮೀಪದ ಹಿತ್ತಿಲಿನಲ್ಲಿರುವ ಬಾವಿಯಲ್ಲಿ ಇಂದು ಪತ್ತೆಯಾಗಿದೆ.
ಮೂಲತ: ಕೊಲ್ಲಂ ನಿವಾಸಿಯಾಗಿರುವ ಪ್ರತೀಷ್ ಪತಿಯಾಗಿದ್ದು ರಮ್ಯಾ ಹಾಗೂ ಮಗು ಭಾನುವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹಾಗೂ ಸ್ಥಳೀಯರು ಶೋಧ ನಡೆಸಿದ್ದರು. ಈ ನಡುವೆ ಮನೆ ಸಮೀಪದ ಬಾವಿಯಲ್ಲಿ ಇಂದು ಬೆಳಿಗ್ಗೆ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಕಾಙಂಗಾಡ್ ನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಇಬ್ಬರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು ಎಂದು ಪೆÇಲೀಸರು ತಿಳಿಸಿದ್ದಾರೆ.
ರಮ್ಯಾ ಕೆಲ ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ನೀಲೇಶ್ವರ ಠಾಣಾ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.