Saturday, November 23, 2024
ಸುದ್ದಿ

ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಹಾರಿ ವೃದ್ಧ ಆತ್ಮಹತ್ಯೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಹಾರಿ ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಗೇರುಕಟ್ಟೆಯ ಪರಪ್ಪು ನಿವಾಸಿ ಮುತ್ತಪ್ಪ ಶೆಟ್ಟಿ (70) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಉಪ್ಪಿನಂಗಡಿ-ಬೆಳ್ತಂಗಡಿ ರಸ್ತೆಯಲ್ಲಿರುವ ನೇತ್ರಾವತಿ ಸೇತುವೆಯ ಮೇಲೆ ನಿಂತು, ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮೇಲಿನಿಂದ ನದಿಗೆ ಹಾರಿದ್ದಾರೆ, ಈ ಹೊತ್ತಿಗೆ ಸೇತುವೆ ಮೇಲಿಂದ ಕಾರಿನಲ್ಲಿ ಸಂಚರಿಸುತ್ತಿದ್ದ ಉರುವಾಲು ನಿವಾಸಿಗಳಾದ ಹಂಝ ಮತ್ತು ಅಶ್ರಫ್ ಎಂಬವರು ಈ ಘಟನೆಯನ್ನ ನೊಡಿದ್ದಾರೆ. ತಕ್ಷಣ ಕಾರು ನಿಲ್ಲಿಸಿ, ಸೇತುವೆಯ ಇನ್ನೊಂದು ತುದಿಯಲ್ಲಿ ಇದ್ದ ಯು.ಟಿ. ಫಯಾಝ್ ಮತ್ತು ರಶೀದ್ ಕಡವಿನಬಾಗಿಲು ಎಂಬವರಿಗೆ ಮಾಹಿತಿ ನೀಡಿದ್ದು, ಈ ನಾಲ್ವರೂ ನದಿಗೆ ದುಮುಕಿ ನದಿ ನೀರಿನಲ್ಲಿ ಹುಡುಕಾಟ ನಡೆಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನದಿಗೆ ಹಾರಿದ್ದ ವೃದ್ಧ ನೀರಿನ ಆಳಕ್ಕೆ ಹೋಗಿ ಮತ್ತೆ ನೀರಿನಲ್ಲಿ ಕೊಚ್ಚಿ ಹೋಗುವುದನ್ನು ಗಮನಿಸಿದ ಇವರು ಈಜುತ್ತಲೇ ಹೋಗಿ ವೃದ್ಧನನ್ನು ಹಿಡಿದು ರಕ್ಷಿಸಲು ಪ್ರಯತ್ನಿದ್ದು, ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಬಳಿಕ ಅವರು ಮೃತದೇಹವನ್ನು ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಗೆ ತಂದು ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದು ಪ್ರಕರಣ ದಾಖಲಿಸಿದ್ದಾರೆ.