Friday, January 24, 2025
ಸುದ್ದಿ

ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಕಾಸರಗೋಡು : ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕನ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮುಂಡ್ಯತ್ತಡ್ಕದಲ್ಲಿ ನಡೆದಿದೆ.

ಮೃತರನ್ನು ಮುಂಡ್ಯತ್ತಡ್ಕದ ಜನಾರ್ಧನ (34) ಎಂದು ಗುರುತಿಸಲಾಗಿದ್ದು, ಸೋಮವಾರ ಸಂಜೆ ಸಾಮಗ್ರಿ ಖರೀದಿಸಲು ಪೇಟೆಗೆ ತೆರಳಿದ್ದ ಜನಾರ್ಧನ ಮನೆಗೆ ಬಾರದೇ ನಾಪತ್ತೆಯಾಗಿದ್ದರು. ಇದರಿಂದ ಶೋಧ ನಡೆಸಿದ ಮನೆಯವರಿಗೆ ಇಂದು ಬೆಳಗ್ಗೆ ಮನೆಯಿಂದ ಸ್ವಲ್ಪ ದೂರದ ಗೇರು ಮರದ ರೆಂಬೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನಾ ಸ್ಥಳಕ್ಕೆ ಬೇಟಿ ನೀಡಿದ ಬದಿಯಡ್ಕ ಠಾಣಾ ಪೆÇಲೀಸರು ಮಹಜರು ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು