ಮಂಗಳೂರು : ಭೂಗತ ಪಾತಕಿಗಳಾದ ಛೋಟಾ ರಾಜನ್, ರವಿ ಪೂಜಾರಿ ಸಹಚರನಾಗಿದ್ದ ಸುರೇಶ್ ಪೂಜಾರಿಯನ್ನು ಇಂಟರ್ ಪೋಲ್ ಪೊಲೀಸರು ಪಿಲಿಪ್ಪೀನ್ಸ್ ನಲ್ಲಿ ಬಂಧಿಸಿದ್ದಾರೆ.
ಸುರೇಶ್ ಪೂಜಾರಿ ತನ್ನ ಗ್ಯಾಂಗ್ ಕಟ್ಟಿಕೊಂಡು ಅಪರಾಧ ಚಟುವಟಿಕೆ ನಡೆಸುತ್ತಿದ್ದ. ಈತನ ವಿರುದ್ಧ ಬೆಂಗಳೂರು, ರಾಜ್ಯದ ಹಲವೆಡೆ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಆತ ಹತ್ತು ವರ್ಷಗಳ ಹಿಂದೆ ರವಿ ಪೂಜಾರಿ ಗ್ಯಾಂಗ್‍ನಿಂದ ದೂರವಾಗಿ ತನ್ನದೇ ಪ್ರತ್ಯೇಕ ಗ್ಯಾಂಗ್ ಕಟ್ಟುಕೊಂಡಿದ್ದ, ತನ್ನ ಬೇಡಿಕೆಗೆ ಕಿವಿಗೊಡದಿದ್ದರೆ ಉದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳಿಗೆ ಹಣದ ಬೇಡಿಕೆ ಮತ್ತು ಕೊಲೆ ಬೆದರಿಕೆ ಕರೆ ಮಾಡುತ್ತಿದ್ದ ಈತ ಭಾರತದಿಂದ ಪಲಾಯನ ಮಾಡಿ ವಿವಿಧ ದೇಶಗಳಲ್ಲಿ ನಕಲಿ ದಾಖಲೆಗಳನ್ನು ಬಳಸಿಕೊಂಡು ವಾಸಿಸುತ್ತಿದ್ದ, ಇದೀಗ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಇನ್ನೂ ಮಾಹಿತಿ ಬಹಿರಂಗವಾಗಿಲ್ಲ.