Friday, January 24, 2025
ಸುದ್ದಿ

ಸ್ಮಾರ್ಟ್ ಸ್ಕೂಲ್ ಆಗಿ ಅಭಿವೃದ್ಧಿಗೊಂಡ ಶ್ರೀ ಜ್ಞಾನೋದಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶ್ರೀ ಜ್ಞಾನೋದಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಸ್ಮಾರ್ಟ್ ಸ್ಕೂಲ್ ಆಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳು ಪೂರ್ಣಗೊಂಡಿದ್ದು, ಅದನ್ನು ಉದ್ಘಾಟಿಸಿ, ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮಕ್ಕಳಿಗೆ ಶಿಕ್ಷಣ ನೀಡಲು ಚಿಂತಿಸಲಾಗಿದೆ. ಆ ನಿಟ್ಟಿನಲ್ಲಿ ಸ್ಮಾರ್ಟ್ ಸ್ಕೂಲ್ ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದೇವೆ. ಕಲಿಯುವ ಮಕ್ಕಳಿಗೆ ಶೈಕ್ಷಣಿಕವಾಗಿ ಸಮಸ್ಯೆ ಉಂಟಾಗದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಸ್ಕೂಲ್ ಪರಿಕಲ್ಪನೆಗೆ 3 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಲಾಗಿತ್ತು. 3 ಶಾಲೆಗಳನ್ನು ಕೂಡ ಸಂಪೂರ್ಣವಾಗಿ ಆಧುನಿಕರಣಗೊಳಿಸಿದ್ದು, ಶೌಚಾಲಯ, ಹೂದೋಟ, ನೆಲಹಾಸು, ಹೆಂಚು ಪಕ್ಕಾಸುಗಳು ಸೇರಿದಂತೆ ಆನ್ಲೈನ್ ಶಿಕ್ಷಣಕ್ಕೆ ಬೇಕಾದ ಸೌಕರ್ಯಗಳನ್ನು ಕೂಡ ಒದಗಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಲ ರಾವ್, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೋಕೇಶ್ ಬೊಳ್ಳಾಜೆ, ಲೀಲಾವತಿ ಪ್ರಕಾಶ್, ಶೋಭಾ ರಾಜೇಶ್, ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು, ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು