Friday, January 24, 2025
ಸುದ್ದಿ

ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿಕೆ : ವೈದ್ಯರು, ನರ್ಸ್‍ಗಳು, ದಾದಿಯರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಹೊಸ ದಾಖಲೆ ನಿರ್ಮಾಣ ಮಾಡಿದ್ದು, ದೇಶದಲ್ಲಿ 100 ಕೋಟಿ ಡೋಸ್ ಪೂರ್ಣಗೊಂಡಿದೆ.

ಭಾರತದಲ್ಲಿ ಕೇವಲ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಲಸಿಕೆ ನೀಡಿದ ದೇಶ ಭಾರತವಾಗಿದೆ. ಭಾರತದಲ್ಲಿ ನೀಡಲಾದ ಕೋವಿಡ್-19 ಲಸಿಕೆ ಡೋಸ್‍ಗಳ ಸಂಖ್ಯೆ 100 ಕೋಟಿ ಗಡಿ ದಾಟುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರು ವೈದ್ಯರು, ದಾದಿಯರು ಮತ್ತು ಈ ಸಾಧನೆಯನ್ನು ಸಾಧಿಸಲು ಕೆಲಸ ಮಾಡಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತವು ಇಂದು ಹೊಸ ಇತಿಹಾಸವನ್ನು ಸೃಷ್ಟಿಸಿದ್ದು, 130 ಕೋಟಿ ಭಾರತೀಯರ ಭಾರತೀಯ ವಿಜ್ಞಾನ, ಉದ್ಯಮ ಮತ್ತು ಸಾಮೂಹಿಕ ಮನೋಭಾವದ ವಿಜಯವನ್ನು ನಾವು ನೋಡುತ್ತಿದ್ದೇವೆ. 100 ಕೋಟಿ ಲಸಿಕೆಗಳನ್ನು ದಾಟಿದ ಭಾರತಕ್ಕೆ ಅಭಿನಂದನೆಗಳು. ನಮ್ಮ ವೈದ್ಯರು, ದಾದಿಯರು ಮತ್ತು ಈ ಸಾಧನೆಯನ್ನು ಸಾಧಿಸಲು ಕೆಲಸ ಮಾಡಿದ ಎಲ್ಲರಿಗೂ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು