Friday, January 24, 2025
ಪುತ್ತೂರು

ಬಡಗನ್ನೂರಿನ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ವಿರೋಧಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ, ಗರ್ಭಧರಿಸಿ ಮಗುವಿಗೆ ಜನ್ಮ ನೀಡಲು ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಮತ್ತು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಯಿತು.

ದರ್ಬೆ ವೃತ್ತದ ಬಳಿಯಿಂದ ಪ್ರತಿಭಟನಾಕಾರರು ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಸಂಪ್ಯ ಪೊಲೀಸ್ ಠಾಣಾ ಬಳಿಗೆ ಬಂದು ಅತ್ಯಾಚಾರಕ್ಕೆ ಕಾರಣವಾದ ಆರೋಪಿಯ ವಿರುದ್ಧ ಧಿಕ್ಕಾರ ಕೂಗಿದರಲ್ಲದೆ ಅವರನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿದರು. ಪ್ರಕರಣವನ್ನು ತಿರುಚಿ ಪೊಲೀಸರು ಆರೋಪಿಯ ಪರ ನಿಂತಿದ್ದಾರೆ. ಎಂದೂ ಆಕ್ರೋಶ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು