Friday, January 24, 2025
ಪುತ್ತೂರು

ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದುಗಳ ಹತ್ಯೆಯನ್ನು ಖಂಡಿಸಿ, ಹಿಂದುಗಳ ರಕ್ಷಣೆಗೆ ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಪುತ್ತೂರು ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು : ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದುಗಳ ಹತ್ಯೆ, ಹಿಂದು ದೇವಸ್ಥಾನಗಳ ಧ್ವಂಸ ಹಾಗು ಹಿಂದು ಉತ್ಸವಗಳ ಮೇಲಿನ ದಾಳಿಯನ್ನು ಖಂಡಿಸಿ, ಅಲ್ಲಿನ ಹಿಂದುಗಳನ್ನು ರಕ್ಷಿಸಲು ಕೇಂದ್ರ ಸರಕಾರ ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗಬೇಕೆಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲೆ ವತಿಯಿಂದ ಸಹಾಯಕ ಆಯುಕ್ತರು ಹಾಗು ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಕಾರ್ಯದರ್ಶಿ ಸತೀಶ್ ಬಿ ಎಸ್, ಸೇವಾ ಪ್ರಮುಖ್ ನರಸಿಂಹ ಪೂಂಜಾ, ಪ್ರಖಂಡ ಉಪಾಧ್ಯಕ್ಷ ಸೇಸಪ್ಪ ಬೆಳ್ಳಿಪ್ಪಾಡಿ, ಸತ್ಸಂಗ ಪ್ರಮುಖ್ ರವಿಕುಮಾರ್ ಕೈತಡ್ಕ, ಬಜರಂಗದಳ ಸಂಯೋಜಕ ಹರೀಶ್ ಕುಮಾರ್ ದೋಳ್ಪಾಡಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು