Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಡಿಸಿಪಿ ಹರಿರಾಮ್ ಶಂಕರ್ ಕೊಲೆ ಯತ್ನ : ಮರಳು ಲಾರಿ ಹತ್ತಿಸಲು ಯತ್ನಿಸಿದ ಚಾಲಕನ ಬಂಧನ – ಕಹಳೆ ನ್ಯೂಸ್

ಮಂಗಳೂರು: ಡಿಸಿಪಿ ಕಾರಿನ ಮೇಲೆ ಮರಳು ಸಾಗಣೆ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಈಚೆಗೆ ನಡೆದಿದೆ. ಮಂಗಳೂರು ಹೊರವಲಯದ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಡಿಸಿಪಿ ಹರಿರಾಮ್ ಶಂಕರ್ ಪ್ರಯತ್ನಿಸಿದ್ದರು.

ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವೇಳೆ ದಾಳಿ ನಡೆಸಿದ್ದ ಡಿಸಿಪಿ ಹರಿರಾಮ್ ಶಂಕರ್​ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಬೆನ್ನಟ್ಟಿ, ಪರಂಗಿಪೇಟೆ ಔಟ್​ ಪೋಸ್ಟ್​ ಬಳಿ ಲಾರಿ ಅಡ್ಡಗಟ್ಟಿದ್ದರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಚಾಲಕ ಪ್ರಯತ್ನಿಸಿದ್ದ. ಬಳಿಕ ಔಟ್​ಪೋಸ್ಟ್​ನ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

ಮತ್ತೆ ಮರಳು ಸಾಗಣೆ ಲಾರಿ ಹಿಂಬಾಲಿಸಿದ್ದ ಡಿಸಿಪಿ ಹರಿರಾಮ್ ಸೂಚನೆಯಂತೆಎ ಪೊಲೀಸರು ಬಂಟ್ವಾಳದಲ್ಲಿ ಮರಳು ಲಾರಿ ವಶಕ್ಕೆ ಪಡೆದರು. ಲಾರಿ ಚಾಲಕ ಮತ್ತು ಲಾರಿಯನ್ನು ಹಿಂಬಾಲಿಸುತ್ತಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳ ವಿರುದ್ಧ ಮರಳು ಕಳವು, ನಿರ್ಲಕ್ಷ್ಯದ ಚಾಲನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ. ಮರಳುಗಳ್ಳರು ತಪ್ಪಿಸಿಕೊಂಡು ಹೋಗುವ ಸಿಸಿಟಿವಿ ದೃಶ್ಯ ಪೊಲೀಸರಿಗೆ ಸಿಕ್ಕಿದೆ.