Sunday, January 19, 2025
ಸುದ್ದಿ

100 ಕೋಟಿಗೂ ಅಧಿಕ ಲಸಿಕಾ ಡೋಸ್ ಯಶಸ್ವು – ಮಂಗಳೂರಿನಲ್ಲಿ ಅರೋಗ್ಯ ಕಾರ್ಯಕರ್ತರಿಗೆ ಆಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಲಸಿಕಾ ಅಭಿಯಾನದ ಮೂಲಕ 100 ಕೋಟಿಗೂ ಅಧಿಕ ಲಸಿಕಾ ಡೋಸ್ ನೀಡುವಲ್ಲಿ ಮಹತ್ತರ ಪಾತ್ರ ವಹಿಸಿದ ಅರೋಗ್ಯ ಕಾರ್ಯಕರ್ತರನ್ನು ಆಭಿನಂದಿಸುವ ಕಾರ್ಯಕ್ರಮ, ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಬಿಜೆಪಿ ದಕ್ಷಿಣ ಮಂಡಲದ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ ರವರ ಉಪಸ್ಥಿತಿಯಲ್ಲಿ, ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆಯುμï ವಿಭಾಗದ ಲಸಿಕಾ ಕೇಂದ್ರದಲ್ಲಿ ಜರುಗಿತು. ಕಾರ್ಯಕರ್ತರಿಗೆ ಹೂಗುಚ್ಚಗಳನ್ನು ನೀಡುವ ಮೂಲಕ ಅಭಿನಂದಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ್ ಹಾಗೂ ಸುಧೀರ್ ಶೆಟ್ಟಿ ಕಣ್ಣೂರು, ದಕ್ಷಿಣ ಮಂಡಲ ಉಪಾಧ್ಯಕ್ಷರಾದ ರಮೇಶ್ ಹೆಗ್ಡೆ, ಕಿರಣ್ ರೈ, ಮಂಡಲ ಪದಾಧಿಕಾರಿಗಳು , ಮ ನ ಪಾ ಸದಸ್ಯರು, ಮಹಾಶಕ್ತಿ ಪದಾಧಿಕಾರಿಗಳು , ವಿವಿಧ ಮೋರ್ಚಾಗಳ ಹಾಗೂ ಪ್ರಕೋಷ್ಠಗಳ ಪದಾಧಿಕಾರಿಗಳು, ಶಕ್ತಿ ಕೇಂದ್ರ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.