Sunday, January 19, 2025
ಸುಳ್ಯ

ಬೆಳ್ಳಾರೆ ಮಸೀದಿ ಆಡಳಿತ ಮಂಡಳಿ ಚುನಾವಣೆ ವಿಚಾರದಲ್ಲಿ ತರಕಾರು : ಇತ್ತಂಡಗಳ ನಡುವೆ ಹೊಡೆದಾಟ – ಕಹಳೆ ನ್ಯೂಸ್

ಬೆಳ್ಳಾರೆ :  ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ, ಎರಡು ತಂಡಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ.

ಆಸಿರ್, ಹಾರಿಸ್, ಹಮೀದ್, ಮುನೀರ್, ಹೈದರಾಲಿ ಮತ್ತು ಮಹಮ್ಮದ್ ಅಜರುದ್ದೀನ್, ಜಮಾಲುದ್ದೀನ್ ಕೆ.ಎಸ್., ಅಬ್ದುಲ್ ಜಮಾಲ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಹೊಡೆದಾಟದಲ್ಲಿ ಕೆಲವರಿಗೆ ಗಾಯವಾಗಿದ್ದು, ಗಾಯಾಳುಗಳ ಪೈಕಿ ಒಂದು ತಂಡದ ಅಜರುದ್ದೀನ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇನ್ನೊಂದು ತಂಡದ ಹೈದರಾಲಿ ಮತ್ತು ಆಸಿರ್ ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ಇತ್ತಂಡದವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು