Sunday, November 24, 2024
ಸುದ್ದಿ

ಡಿಸೆಂಬರ್‌ನಿ0ದ ಬೆಂಕಿ ಪೊಟ್ಟಣದ ಬೆಲೆ ಏರಿಕೆ – ಕಹಳೆ ನ್ಯೂಸ್

ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾ ಇದೆ. ಪೆಟ್ರೋಲ್-ಡಿಸೇಲ್, ಬಂಗಾರ, ತೈಲ ಸೇರಿದಂತೆ ಅನೇಕ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದಿಗ ಈ ಸರದಿಗೆ ಬೆಂಕಿಕಡ್ಡಿಯೂ ಸೇರ್ಪಡೆಯಾಗಿದೆ. ಡಿಸೆಂಬರ್ 1 ರಿಂದ ಬೆಂಕಿ ಪೊಟ್ಟಣದ ಬೆಲೆ ಏರಲಿದೆ. ಒಂದು ರೂಪಾಯಿಯಿದ್ದ ಬೆಲೆ 2 ರೂಪಾಯಿಯಾಗಲಿದೆ.
ತಮಿಳುನಾಡಿನ ಶಿವಕಾಶಿಯಲ್ಲಿ ಐದು ಪ್ರಮುಖ ಬೆಂಕಿಪೊಟ್ಟಣದ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆದಿದೆ. ಸಭೆಯಲ್ಲಿ ಬೆಂಕಿಪೊಟ್ಟಣದ ಬೆಲೆ ಏರಿಕೆಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

2007 ರಲ್ಲಿ ಬೆಂಕಿಪೊಟ್ಟಣದ ಬೆಲೆಯನ್ನು ಏರಿಸಲಾಗಿತ್ತು. 50 ಪೈಸೆಯಿದ್ದ ಬೆಲೆಯನ್ನು 1 ರೂಪಾಯಿಗೆ ಏರಿಸಲಾಗಿತ್ತು. 14 ವರ್ಷದ ನಂತ್ರ ಪೊಟ್ಟಣದ ಬೆಲೆ ಹೆಚ್ಚಾಗ್ತಿದೆ. ಬೆಂಕಿಕಡ್ಡಿಗಳನ್ನು ತಯಾರಿಸಲು 14  ರೀತಿಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ. ಕೆಂಪು ರಂಜಕದಿ0ದ ಹಿಡಿದು, ಮೇಣ, ಬಾಕ್ಸ್ ಬೋರ್ಡ್, ಪೇಪರ್, ಸ್ಪ್ಲಿಂಟ್ಸ್, ಪೊಟಾಶಿಯಂ ಕ್ಲೋರೇಟ್ ಮತ್ತು ಸಲ್ಫರ್ ಬೆಲೆಯೂ ಹೆಚ್ಚಾಗಿದೆ. ಇದ್ರಿಂದ ಬೆಂಕಿಪೊಟ್ಟಣದ ಬೆಲೆ ಹೆಚ್ಚಳ ಅನಿವಾರ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು