Monday, January 20, 2025
ಬಂಟ್ವಾಳ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಸುಮಾರು 35-45 ವರ್ಷ ಪ್ರಾಯದ ಗಂಡಸಿನ ಅಪರಿಚಿತ ಶವ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ತುಂಬೆ ಡ್ಯಾಂನಲ್ಲಿ ಸುಮಾರು 35-45 ವರ್ಷ ಪ್ರಾಯದ ಗಂಡಸಿನ ಮೃತ ದೇಹ ಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇತ್ರಾವತಿ ನದಿಯಲ್ಲಿ ತೇಲಾಡುತ್ತಿದ್ದ ಶವದ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಮೇಲಕ್ಕೆತ್ತಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ವ್ಯಕ್ತಿಯು ಆಕಾಶ ನೀಲಿ ಬಣ್ಣದ ತುಂಬುತೋಳಿನ ಶರ್ಟು, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಬಲಕೈಯಲ್ಲಿ ಕೆಂಪು ಬಣ್ಣದ ದಾರವಿದೆ. ಮೃತ ವ್ಯಕ್ತಿಯ ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸಬಹುದು.

ಜಾಹೀರಾತು
ಜಾಹೀರಾತು
ಜಾಹೀರಾತು